HomeKarnatakaಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ, ಮಾನ್ವಿಗೆ ಬಿ.ವಿ. ನಾಯಕ್

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ, ಮಾನ್ವಿಗೆ ಬಿ.ವಿ. ನಾಯಕ್

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ ಮಾಡಿದೆ.

ಕೆ.ಎಸ್. ಈಶ್ವರಪ್ಪ ಅವರ ಕುಟುಂಬದವರ ಬದಲಿಗೆ ಆಪ್ತ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಂಸದ ಬಿ.ವಿ. ನಾಯಕ್ ಅವರಿಗೆ ಮಾನ್ವಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಕೊನೆಯವರೆಗೂ ಗೌಪ್ಯವಾಗಿ ಇಡಲಾಗಿತ್ತು. ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಸೇರಿದಂತೆ ಹಲವರ ಹೆಸರುಗಳು ಕೇಳಿ ಬಂದಿದ್ದವು. ಅಂತಿಮವಾಗಿ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular