HomeKarnatakaಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ....!

ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ….!

ತೋಟದಲ್ಲಿ ಪತ್ತೆಯಾದ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಮರಂಡೂದ ಗ್ರಾಮದಲ್ಲಿ ನಡೆದಿದೆ.

ಮೇರಿಯಂಡ ಅಪ್ಪಣ್ಣ ಎಂಬವರ ತೋಟದಲ್ಲಿ ಭಾನುವಾರದಂದು ಈ ಕಾಳಿಂಗ ಸರ್ಪ ಕಂಡು ಬಂದಿದ್ದು, ಇದನ್ನು ನೋಡಿದ ಕೆಲಸಗಾರರು ಭಯಗೊಂಡು ಅಪ್ಪಣ್ಣನವರಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಉರಗತಜ್ಞ ಪೊನ್ನೀರ ಸ್ನೇಕ್ ಗಗನ್ ಅವರನ್ನು ಸಂಪರ್ಕಿಸಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅವರು ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆಹಿಡಿದು ಪೆರುಂಬಾಡಿಯ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular