ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಕಸ ಸರ ಕಸಿದು ಖದೀಮರು ಪರಾರಿಯಾಗಿದ್ದಾರೆ.
ರಾಚೇನಹಳ್ಳಿ ಪಾರ್ಕ್ ನಲ್ಲಿ ಮಹಿಳೆ ವಾಕಿಂಗ್ ಮಾಡುವಾಗ ಖದೀಮರು ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ. ಪ್ರೇಮಾ ಎಂಬುವವರ 50 ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ. ಎಫ್ಐಆರ್ ದಾಖಲಿಸಿಕೊಂಡ ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿಗಳಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ.

