HomeLatest NewsBig Update: ಧಾರವಾಡ ಡಿಸಿಯಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ

Big Update: ಧಾರವಾಡ ಡಿಸಿಯಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ

ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿತ್ತು. ಧಾರವಾಡ ಡಿಸಿಯಾಗಿದ್ದ ದಿವ್ಯಪ್ರಭು ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿತ್ತು.

ಕರ್ನಾಟಕ ಸರ್ಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕಿಯಾಗಿದ್ದ ಮತ್ತು 2017-18ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಸ್ನೇಹಲ್.ಆರ್ ಅವರು ಬುಧವಾರ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು.

ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ಮಂಗಳವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಸ್ನೇಹಲ್.ಆರ್. ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಪದಾಧಿಕಾರಿಗಳು, ಹಿತೈಷಿಗಳು ಇದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular