HomeKarnatakaBIG NEWS: ಸಿಸಿಬಿಯಿಂದ ಬಂಧನ ವಿಚಾರ: ಸ್ನೇಹಮಯಿ ಕೃಷ್ಣ ಹೇಳಿದ್ದೇನು?

BIG NEWS: ಸಿಸಿಬಿಯಿಂದ ಬಂಧನ ವಿಚಾರ: ಸ್ನೇಹಮಯಿ ಕೃಷ್ಣ ಹೇಳಿದ್ದೇನು?

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾದಿಕಾರ-ಮುಡಾದ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಕೋತ್ಯಂತರ ರೂಪಾಯಿ ಲಂಚ ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆ ಎಂದು ಆರೋಪಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ, ಸುದೀರ್ಘ ವಿಚಾರಣೆ ನಡೆಸಿದ್ದರು.

ಸಿಸಿಬಿ ಪೊಲೀಸರಿಂದ ಬಂಧನದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟೇಶ್ ಅವರು, ನಾನು ಆಡಿಯೋ ಸೃಷ್ಟಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದೇನೆ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ ಎಂದು ದೂರು ನೀಡಿದ್ದರು. ಈ ದೂರು ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ವಿಚಾರಣೆಗಾಗಿ ಕರೆತರಲಾಗಿತ್ತು ಹೊರತು ಬಂಧಿಸಿಲ್ಲ ಎಂದು ಹೇಳಿದ್ದಾರೆ.

ನಟೇಶ್ ಹಾಗೂ ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ನಟೇಶ್ ದುಡ್ಡು ಕೇಳಬಾರದು ಅಂತಾ ಈ ರೀತಿ ಮಾಡಿದ್ದಾನೆ. ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ಮುಡಾ ಪ್ರಕರಣಕ್ಕೂ ಹಾಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular