2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಾಸನ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ 5,53,343 ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷಾ ಕಾರ್ಯಕ್ಕೆ ಈಗಾಗಲೇ ಪೂರ್ವಸಿದ್ದತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅದರ ಪ್ರಥಮ ಹಂತವಾಗಿ, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ) ಇಲಾಖೆಯ ಸಿಬ್ಬಂದಿಗಳು ವಿದ್ಯುತ್ ಮೀಟರ್ ರೀಡರ್ಗಳಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳನ್ನು ಪಟ್ಟಿ ಮಾಡಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಜೊತೆಗೆ ಜಿಯೋ-ಟ್ಯಾಗಿಂಗ್ ಮಾಡುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.
ಹಾಗೆಯೇ ಗ್ರಾಮ ಆಡಳಿತಾಧಿಕಾರಿ ಮತ್ತು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಂದ ಆರ್.ಆರ್ ನಂಬರ್ ಹೊಂದಿಲ್ಲದೇ ಇರುವ (ವಿದ್ಯುತ್ಚ್ಛಕ್ತಿ ಸಂಪರ್ಕವಿಲ್ಲದಿರುವ) ಮನೆಗಳನ್ನು ಪಟ್ಟಿ ಮಾಡಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಜೊತೆಗೆ ಜಿಯೋ-ಟ್ಯಾಗಿಂಗ್ ಮಾಡುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ. ಮನೆಯ ಮುಖ್ಯ ದ್ವಾರದಲ್ಲಿ ಅಂಟಿಸಿರುವ ಸದರಿ ಸ್ಟಿಕ್ಕರ್ಗಳನ್ನು ಸಾರ್ವಜನಿಕರು ಗಣತಿ ಕಾರ್ಯ ಮುಗಿಯುವವರೆಗೂ ಗೀಚುವುದಾಗಲಿ, ಕಿತ್ತುಹಾಕುವುದಾಗಲಿ ಮಾಡಬಾರದು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2025ರ ಮನೆ ಮನೆ ಸಮೀಕ್ಷೆಯನ್ನು ಇದೇ ತಿಂಗಳು ಸೆಪ್ಟೆಂಬರ್-22 ರಿಂದ ಅಕ್ಟೋಬರ್-07 ರವೆರಗೆ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಳ್ಳಲು ಗಣತಿದಾರರು ನಿಮ್ಮ ಮನೆಗಳಿಗೆ ಬರುವ ಪ್ರಯುಕ್ತ ಸಾರ್ವಜನಿಕರು ಈ ಗಣತಿ ಕಾರ್ಯಕ್ಕೆ ಕುಟುಂಬದ ಎಲ್ಲಾ ಸದಸ್ಯರ ಸರಿಯಾದ ಸಂಪೂರ್ಣ ವಿವರವಾದ ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆಯನ್ನು ದೃಢೀಕರಣ ಪತ್ರವಾಗಿ ಆಧಾರ್ ಮಾಡಿಕೊಂಡು ಸಮೀಕ್ಷೆಯನ್ನು ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್/ಸಂಖ್ಯೆ, ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದಲ್ಲಿ UIಆ ಕಾರ್ಡ್ ಅಥವಾ ಪ್ರಮಾಣ ಪತ್ರಗಳನ್ನು ಸಿದ್ದವಾಗಿಟ್ಟುಕೊಳ್ಳುವುದು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ ನಂಬರ್ಗಳಿಗೆ ಲಿಂಕ್ ಆಗಿರುವುದನ್ನ ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿರುತ್ತದೆ.
ಸಮೀಕ್ಷೆ ವೇಳೆ E-Kyc (Aadhar) ಪ್ರಕ್ರಿಯೆಗಾಗಿ ಒ.ಟಿ.ಪಿ. ಸಂಖ್ಯೆ ಆ ಸದಸ್ಯರ ಆಧಾರ್ ನಂಬರ್ಗೆ ಜೊಡಣೆ ಆಗಿರುವ ಮೊಬೈಲ್ ನಂಬರ್ಗೆ ಬರುತ್ತದೆ. ಒಂದು ವೇಳೆ ಆ ಸದಸ್ಯರ ಮನೆಯಲ್ಲಿ ಇಲ್ಲದಿದ್ದರೆ ಕುಟುಂಬದ ಪರವಾಗಿ ಉತ್ತರ ನೀಡುತ್ತಿರುವ ಸದಸ್ಯರ ಫೋನ್ ಮೂಲಕ ಒ.ಟಿ.ಪಿ. ಸಂಖ್ಯೆಯನ್ನು ಪಡೆದು ಮಾಹಿತಿ ನೀಡಬೇಕಾಗುತ್ತದೆ.
06 ವರ್ಷದ ಒಳಗಿನ ಮಕ್ಕಳ ಆಧಾರ್ ಕಾರ್ಡ್ ಲಭ್ಯವಿಲ್ಲದಿದ್ದಲ್ಲಿ ಎನ್ರೋಲ್ಮೆಂಟ್ ನಂಬರ್ ಮಾಹಿತಿಯನ್ನು ನೀಡುವುದು ಹಾಗೂ 06 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಸದಸ್ಯನಿಗೂ ಆಧಾರ್ ಕಡ್ಡಾಯವಾಗಿದೆ. ಆಧಾರ್ ಇಲ್ಲದಿದ್ದರೆ ಹತ್ತಿರದ ಆಧಾರ್ ನೊಂದಣಿ ಕೇಂದ್ರದಲ್ಲಿ ವಿವರಗಳನ್ನು ನೊಂದಾಯಿಸಿ ನೊಂದಣಿ ಸಂಖ್ಯೆಯನ್ನು ಪಡೆದುಕೊಂಡು ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಹಾಗೇಯೇ ಮೊಬೈಲ್ ನಂಬರ್ ಆಧಾರ್ ನಂಬರ್ಗೆ ಲಿಂಕ್ ಆಗದಿದ್ದರೆ ಅದನ್ನು ತಕ್ಷಣವೇ ಲಿಂಕ್ ಮಾಡಿಸಿಕೊಳ್ಳುವುದು.
ಗಣತೀದಾರರ ಪ್ರಶ್ನಾವಳಿಯಲ್ಲಿ ವ್ಯಾಪಾರ, ಉದ್ಯೋಗ, ವಿದ್ಯಾರ್ಹತೆ, ಕೌಶಲ್ಯ ತರಬೇತಿ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ಥಿ ವಿವರ, ಧರ್ಮ, ಜಾತಿ, ಉಪ ಜಾತಿ, ಕುಲ ಕಸುಬು, ಮುಂತಾದ ಮಾಹಿತಿಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ. ಪ್ರತಿ ಕುಟುಂಬಗಳು ಮಾಹಿತಿಯನ್ನು ನೀಡಲು ಹಾಗೂ ಈ ಮೇಲೆ ಹೇಳಿದ ಎಲ್ಲಾ ಸಂಬAಧಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ಸಿದ್ದರಿರಬೇಕಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯೋಗದ ಸಹಾಯವಾಣಿ ಸಂಖ್ಯೆ 8050770004ಗೆ ಕರೆ ಮಾಡಬಹುದು ಅಥವಾ ಆಯೋಗದ ಜಾಲತಾಣ https://kscbc.karnataka.gov.in ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.