ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಬುಧವಾರ ವಿಧಾನಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಸಿದ್ದಾರೆ.
ಸಂಜೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಆಯೋಗದ ಅಧ್ಯಕ್ಷರಿಂದ ವರದಿ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್, ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್, ಆಡಳಿತಾತ್ಮಕ ಕಾರ್ಯದರ್ಶಿ ಊರ್ಮಿಳಾ ಬಿ, ಆಯೋಗದ ವಿಶೇಷ ಸಲಹೆಗಾರರು ಡಿ.ಎನ್.ನಾಯಕ್ ಮತ್ತು ಇತರೆ ತಜ್ಞರು ಈ ವೇಳೆ ಉಪಸ್ಥಿತರಿದ್ದರು.

