HomeKarnatakaಪುತ್ರಿಗೆ ಅಂತರ್ಜಾತಿ ವಿವಾಹ ಮಾಡಿದ ಪೋಷಕರಿಗೆ ಸಾಮಾಜಿಕ ಬಹಿಷ್ಕಾರ

ಪುತ್ರಿಗೆ ಅಂತರ್ಜಾತಿ ವಿವಾಹ ಮಾಡಿದ ಪೋಷಕರಿಗೆ ಸಾಮಾಜಿಕ ಬಹಿಷ್ಕಾರ

ಚಾಮರಾಜನಗರ: ತಮ್ಮ ಪುತ್ರಿಗೆ ಅಂತರ್ಜಾತಿ ವಿವಾಹ ಮಾಡಿದ ಪೋಷಕರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.

ಚಾಮರಾಜನಗರ ತಾಲೂಕಿನ ಬಂಡಿಗೆರೆ ಗ್ರಾಮದ ಕೃಷ್ಣರಾಜು ಮತ್ತು ಮಂಜುಳಾ ದಂಪತಿ ಈ ಕುರಿತಾಗಿ ಆರೋಪ ಮಾಡಿದ್ದು, ನಮ್ಮ ಮಗಳಿಗೆ ಅಂತರ್ಜಾತಿ ಮದುವೆ ಮಾಡಿದ್ದೇವೆ ಎಂಬ ನೆಪ ಮಾಡಿಕೊಂಡು ನಮಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

ಕೊಡಗು ಮೂಲದ ಯುವಕನೊಂದಿಗೆ ನಮ್ಮ ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದೇವೆ. ಈ ಕಾರಣಕ್ಕೆ ಗ್ರಾಮದ ಮುಖಂಡರು 2023 ರಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಯಾವ ಕಾರ್ಯಕ್ರಮಕ್ಕೂ ನಮ್ಮನ್ನೂ ಆಹ್ವಾನಿಸುತ್ತಿಲ್ಲ. ನಮ್ಮ ಮನೆಗೆ ಯಾರೂ ಹೋಗಬಾರದು ಎಂದು ತಾಕೀತು ಮಾಡಿದ್ದಾರೆ. ಇದರಿಂದಾಗಿ ಗ್ರಾಮದ ಯಾರೂ ಕೂಡ ಮನೆಗೆ ಬರುತ್ತಿಲ್ಲ. ನಮ್ಮನ್ನು ದೂರ ಇಟ್ಟಿದ್ದಾರೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು, ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರೂ ಪ್ರಯೋಜನವಾಗದ ಕಾರಣ ಇತ್ತೀಚೆಗೆ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಜನವರಿ 4ರಂದು ಕುಟುಂಬದ ಸದಸ್ಯರಿಗೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular