HomeKarnatakaಜಾಲತಾಣಗಳಲ್ಲಿ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಬಿಡುವುದು ಶಿಕ್ಷಾರ್ಹ ಅಪರಾಧ: ಎಸ್ಐಟಿ ಎಚ್ಚರಿಕೆ

ಜಾಲತಾಣಗಳಲ್ಲಿ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಬಿಡುವುದು ಶಿಕ್ಷಾರ್ಹ ಅಪರಾಧ: ಎಸ್ಐಟಿ ಎಚ್ಚರಿಕೆ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ. ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಮೆಸೆಂಜರ್ ಸೇರಿದಂತೆ ಯಾವುದೇ ಜಾಲತಾಣಗಳಲ್ಲಿ ವಿಡಿಯೋ ಹರಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಕಾಯ್ದೆ ಕಲಂ 228ಎ(1), ಐಪಿಸಿ ಸೆಕ್ಷನ್ 292ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಸಂತ್ರಸ್ತರು ಸಹಾಯವಾಣಿ ಸಂಖ್ಯೆಗೆ(63609 38947) ಕರೆ ಮಾಡಿ ಮಾಹಿತಿ ನೀಡಬಹುದು. ಬೆಳಗ್ಗೆ 8ರಿಂದ ರಾತ್ರಿ 8ರತನಕ ಕರೆ ಮಾಡಿ ಸಂಪರ್ಕಿಸಬಹುದು. ಕರೆ ಮಾಡುವ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತರಿಗೆ ವಿಶೇಷ ತನಿಖಾ ತಂಡ ಅಗತ್ಯ ನೆರವನ್ನು ನೀಡಲಿದೆ ಎಂದು ಪ್ರಕರಣ ಸಂಬಂಧ ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular