ಬೆಳಗಾವಿ : ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿದೆ.
ಇಂದು ರಾಜ್ಯಾದ್ಯಂತ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದ್ದು, ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.
ಬೆಳಗಾವಿ ಪರೀಕ್ಷೆ ಸೆಂಟರ್ ನ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಂದು ಪರೀಕ್ಷೆ ನಡೆಯುತ್ತಿರುವಾಗಲೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ.
ಇನ್ ಸ್ಟಾಗ್ರಾಂ ನಲ್ಲಿ 30 ರೂಪಾಯಿಗೆ ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಲಾಗಿದೆ. ಮೊನ್ನೆ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಇದೀಗ ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

