ಧಾರವಾಡ : 2026-27 ನೇ ಶೈಕ್ಷಣಿಕ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿಗೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯನ್ನು ಅರ್ಹ ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯ, ಸಮವಸ್ತ್ರ, ಪಠ್ಯ ಪುಸ್ತಕ ಇನ್ನಿತರೇ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಆನ್-ಲೈನ್ ನಲ್ಲಿ ಮೇ 04, 2026 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಮತ್ತು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

