HomeLatest News'ಸಮಾಜ ಕಲ್ಯಾಣ ಇಲಾಖೆ'ಯಿಂದ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

‘ಸಮಾಜ ಕಲ್ಯಾಣ ಇಲಾಖೆ’ಯಿಂದ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಕಾನೂನು ಪದವೀಧರರಿಗೆ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯು ಕುಟುಂಬದ ವಾರ್ಷಿಕ ಆದಾಯ (ತಂದೆ/ತಾಯಿ ಸೇರಿ) ರೂ.2.50 ಲಕ್ಷ ಮೀರಿರಬಾರದು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000/- ಗಳ ಶಿಷ್ಯವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ / ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ವೆಬ್ ಸೈಟ್ www.twd.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular