ಧಾರವಾಡ : ಧಾರವಾಡ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಸೈದಾಪೂರನ ಸರ್ಕಾರಿ ವಸತಿ ಶಾಲೆಯಲ್ಲಿನ ಖಾಲಿ ಇರುವ ಸ್ಥಾನಗಳಿಗೆ ಅನುಗುಣವಾಗಿ ಭರ್ತಿ ಮಾಡಲು 01 ನೇ ತರಗತಿಯಿಂದ 05 ನೇ ತರಗತಿವರೆಗಿನ ಅರ್ಹ ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಉಚಿತ ಊಟ-ಉಪಹಾರ, ವಸತಿ, ಪಠ್ಯ ಪುಸ್ತಕ, ಲೇಖನ ಸಾಮಗ್ರಿ, ಶುಚಿ ಸಂಭ್ರಮ ಕಿಟ್, ಸಮವಸ್ತ್ರ, ಶೂ ಮತ್ತು ಸಾಕ್ಸ್, ಸ್ಕೂಲ್ ಬ್ಯಾಗ್, ಉತ್ತಮ ಕೌಶಲ್ಯಯುಕ್ತ ಭೋಧಕರಿಂದ ತರಗತಿ ಭೋದನೆ ಹಾಗೂ ಸರ್ಕಾರದಿಂದ ಕಾಲೋಚಿತವಾಗಿ ಲಭ್ಯವಾಗುವ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು.ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.