ಜಾತೀಯತೆ, ಅಸಮಾನತೆಗಳು ತೊಲಗಿದಾಗ ಮಾತ್ರ ‘ಸಮಾಜ’ ಪರಿವರ್ತನೆಯಾಗಲು ಸಾಧ್ಯ : CM ಸಿದ್ದರಾಮಯ್ಯ

ಬೆಂಗಳೂರು : ಸಮಾಜದಲ್ಲಿ ಜಾತೀಯತೆ, ಅಸಮಾನತೆಗಳು ತೊಲಗಿದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಸಿಎಂ ಸಿದ್ದರಾಮಯ್ಯ ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ,  ‘ಹೋರಾಟಕ್ಕೆ ಸಾವಿಲ್ಲ’ ಮತ್ತು ‘ಓಲೆ ಒಳದನಿ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದರು.

ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ ‘ಹೋರಾಟಕ್ಕೆ ಸಾವಿಲ್ಲ’ ಮತ್ತು ‘ಓಲೆ ಒಳದನಿ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದೆ. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಮಾಜ ಬದಲಾವಣೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಇದು ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಬಾಬಾ ಸಾಹೇಬರು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ. ಮನುಷ್ಯತ್ವ ಪ್ರತಿಯೊಬ್ಬರ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ’ಹೋರಾಟಕ್ಕೆ ಸಾವಿಲ್ಲ’ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು. ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತಿವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವೀಯ ಧರ್ಮ ಪೀಠ ಎನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾಮೀಜಿಗಳು ನಿರ್ಭಿತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಮಹಾಸ್ವಾಮೀಜಿ, ಸಾರಂಗಧರ ದೇಶೀಕೆಂದ್ರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಸಂಸ್ಕೃತಿ ಚಿಂತಕರಾದ ರಂಜಾನ್ ದರ್ಗಾ, ಡಾ.ನಟರಾಜ್ ಹುಳಿಯಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

https://twitter.com/siddaramaiah/status/1740990350876152199

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read