HomeKarnatakaBIG NEWS: ಸೋಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರು ಅರೆಸ್ಟ್

BIG NEWS: ಸೋಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರು ಅರೆಸ್ಟ್

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು ಇದೀಗ ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ.

ಕ್ಯಾಮರಾ ಮೆನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಇಬ್ಬರನ್ನು ತುಮಕೂರಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.

ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೋರ್ವ ಆರೋಪಿ ಫಾರ್ಮ್ ಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈಗಾಗಲೇ ಡ್ರೋನ್ ಪ್ರತಾಪ್ ಗೆ ಮಧುಗಿರಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular