ಮನೆಯಲ್ಲಿರುವ ಬಿಜೆಪಿ ಬಾವುಟ ಶಿಫ್ಟ್: ಪಕ್ಷೇತರನಾಗಿ ಸ್ಪರ್ಧೆ: ಸೊಗಡು ಶಿವಣ್ಣ ಘೋಷಣೆ; ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ

ತುಮಕೂರು: ತುಮಕೂರು ನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಬೆಂಬಲಿಸಿ 400ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹಾಗೂ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದ್ದಾರೆ.

ರಾಜೀನಾಮೆ ಘೋಷಣೆ:

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಘೋಷಣೆ ಮಾಡಿದ್ದಾರೆ. ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಟಿಕೆಟ್ ಕೊಡಿ ಎಂದರೆ ಬಿಜೆಪಿಯವರು ಯಾವುದೇ ಬೆಲೆ ನೀಡಿಲ್ಲ. ನಾನು ಮುಂದೆ ಏನು ಮಾಡಲಿ ಎಂದು ಬೆಂಬಲಿಗರಿಗೆ ಶಿವಣ್ಣ ಪ್ರಶ್ನಿಸಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಸ್ವಲ್ಪ ಸಮಯ ಕೊಡಿ ಎಂದು ಬೆಂಬಲಿಗರಲ್ಲಿ ಸೊಗಡು ಶಿವಣ್ಣ ಮನವಿ ಮಾಡಿದ್ದಾರೆ.

ಮನೆಯೊಳಗೆ ಬಿಜೆಪಿ ಬಾವುಟಗಳಿವೆ. ಅವುಗಳನ್ನು ಸ್ಥಳಾಂತರ ಮಾಡುತ್ತೇನೆ. ಶೀಘ್ರದಲ್ಲಿಯೇ ಬಿಜೆಪಿಗೆ ರಾಜೀನಾಮೆ ನೀಡುತ್ತೇ ಎಂದು ಘೋಷಣೆ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ದಿನಾಂಕ ತಿಳಿಸುತ್ತೇನೆ ಎಂದು ಬೆಂಬಲಿಗರ ಸಭೆಯಲ್ಲಿ ಸೊಗಡು ಶಿವಣ್ಣ ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read