HomeKarnatakaರೈತರಿಗೆ ಗುಡ್ ನ್ಯೂಸ್: ಪ್ರಸಕ್ತ ಸಾಲಿನಲ್ಲಿ 40,000 ಕೃಷಿ ಪಂಪ್ಸೆಟ್ ಸಕ್ರಮಗೊಳಿಸಿ ಸೌರ ವಿದ್ಯುತ್ ಸಂಪರ್ಕ

ರೈತರಿಗೆ ಗುಡ್ ನ್ಯೂಸ್: ಪ್ರಸಕ್ತ ಸಾಲಿನಲ್ಲಿ 40,000 ಕೃಷಿ ಪಂಪ್ಸೆಟ್ ಸಕ್ರಮಗೊಳಿಸಿ ಸೌರ ವಿದ್ಯುತ್ ಸಂಪರ್ಕ

ಬೆಂಗಳೂರು: ರಾಜ್ಯದಲ್ಲಿ 40,000 ಕೃಷಿ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಚಾರ್ಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 2008 ರಿಂದ 2023ರ ಸೆಪ್ಟೆಂಬರ್ 22 ರವರೆಗೆ ನೋಂದಣಿಯಾಗಿರುವ 4 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳು ಇವೆ. ಇವುಗಳಲ್ಲಿ 40,000 ಕೃಷಿ ಪಂಪ್ ಸೆಟ್ ಗಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕುಸುಮ್ -ಬಿ ಯೋಜನೆಯಡಿ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಿ ಸಕ್ರಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

4 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳ ರೈತರು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ್ದು, ವಿದ್ಯುತ್ ಮಾರ್ಗ ಜಾಲದಿಂದ 500 ಮೀಟರ್ ಒಳಗಿದ್ದರೆ ಫೀಡರ್ ನಿಂದ ವಿದ್ಯುತ್ ಸಂಪರ್ಕ ಮತ್ತು ಮೂಲಸೌಕರ್ಯ ಕಲ್ಪಿಸಲಾಗುತ್ತದೆ. 500 ಮೀಟರ್ ಗಿಂತ ದೂರ ಇರುವ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡುವ ಕಾರಣಕ್ಕೆ ಕುಸುಮ್ ಬಿ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸೌರ ವಿದ್ಯುತ್ ಚಾಲಿತ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಕುಸುಮ್ -ಬಿ ಯೋಜನೆಯಡಿ ಶೇಕಡ 30ರಷ್ಟು ಸಹಾಯಧನ ನೀಡಲಿದ್ದು, ರಾಜ್ಯ ಸರ್ಕಾರದ ಸಹಾಯಧನವನ್ನು ಶೇಕಡ 50ಕ್ಕೆ ಹೆಚ್ಚಳ ಮಾಡಲಾಗಿದೆ. ಬಾಕಿ ಶೇಕಡ 20ರಷ್ಟು ರೈತರು ಭರಿಸಬೇಕಿದೆ. ಈ ಯೋಜನೆಯಡಿ ರೈತರಿಗೆ ಪಂಪ್, ಮೋಟಾರ್, ಪೈಪ್ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular