ಶ್ರೀನಗರ: ತನ್ನದೇ ಸರ್ವಿಸ್ ರಿಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಯೋಧನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಇಲ್ಲಿನ ಗುಲ್ ಮಾರ್ಗ್ ಪ್ರದೇಶದ ಮಿಲಿಟರಿ ಕ್ಯಾಂಪ್ ಬಳಿ ಯೋಧನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಸ್ಥಾನ ಮೂಲದ ಲ್ಯಾನ್ಸ್ ನಾಯಕ್ ಬನ್ವರ್ ಲಾಲ್ ಸರನ್ ಮೃತ ಯೋಧ.
ಯೋಧನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.