ಮಗಳ 5ನೇ ವರ್ಷದ ಹುಟ್ಟುಹಬ್ಬಕ್ಕೆ ಊರಿಗೆ ಬಂದಿದ್ದ ಯೋಧ ಹಠಾತ್ ಸಾವು

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

42 ವರ್ಷದ ಸುರೇಶ್ ಮೃತ ಯೋಧ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್ ನಲ್ಲಿ ನಾಯಕ್ ಸುಬೇದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮಗಳು ಪ್ರಕೃತಿಯ 5ನೇ ವರ್ಷದ ಹುಟ್ಟುಹಬ್ಬಕ್ಕಾಗಿ ಹೊಸ ಅಗ್ರಹಾರದ ಮನೆಗೆ ಬಂದಿದ್ದರು. ಹುಟ್ಟುಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಡೋರ್ನಹಳ್ಳಿಯಲ್ಲಿನ ಅನಾಥಾಶ್ರಮದ ಮಕ್ಕಳಿಗೆ ಊಟ ನೀಡಲು ಸಿದ್ಧತೆ ನಡೆಸಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read