ಮೀನು ಪ್ರಿಯರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ತಾಜಾ ಮೀನು, ಖಾದ್ಯ

ಬೆಂಗಳೂರು: ಮನೆ ಬಾಗಿಲಿಗೆ ತಾಜಾ ಮೀನು ಒದಗಿಸಲು 150 ಮತ್ಸ್ಯವಾಹಿನಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮತ್ಸ್ಯವಾಹಿನಿ ಪರಿಸರ ಸ್ನೇಹಿತರ ವಾಹನಗಳ ಸೇವೆಗೆ ಚಾಲನೆ ನೀಡಿದ ಸಿಎಂ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಹಾರ ಸಂಸ್ಕೃತಿಯ ಪ್ರಮುಖವಾಗಿರುವ ಮೀನು ಅತ್ಯಂತ ಆರೋಗ್ಯಕಾರಿ ಆಹಾರವಾಗಿದೆ. ಮೀನಿನ ಸಂತತಿ ಮತ್ತು ಪ್ರಮಾಣ ಹೆಚ್ಚಳಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಮೀನುಗಾರರ ಸಮುದಾಯದ ಮಹಿಳೆಯರಿಗೆ ನೀಡುತ್ತಿದ್ದ 50,000 ರೂ. ಸಹಾಯಧನವನ್ನು 3 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡಲಾಗುವುದು ಎಂದರು.

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು. ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ ಎಂದು ಹೇಳಿದರು.

1977 ರಲ್ಲಿ ದೆಹಲಿಯಲ್ಲಿ ಹತ್ತಾರು ದೇಶಗಳ ಮೀನುಗಾರ ಸಮುದಾಯದ ಪ್ರತಿನಿಧಿಗಳು ಸಮುದಾಯದ ಹಿತಕ್ಕಾಗಿ ಮೊದಲ ಸಭೆ ನಡೆಸಿದರು. ಅಲ್ಲಿಂದ ಪ್ರತಿವರ್ಷ ವಿಶ್ವ ಮೀನುಗಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮೀನುಗಾರ ಸಮುದಾಯದ ಜತೆ ನೇರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಎಲ್ಲಾ ಸಮಸ್ಯೆಗಳಿಗೂ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮೊದಲಾದವರು ಇದ್ದರು.

150 ಮತ್ಸ್ಯವಾಹಿನಿ ವಾಹನಗಳು ಬೆಂಗಳೂರು ನಗರದಲ್ಲಿ ಸಂಚರಿಸಲಿವೆ. ಬೆಳಿಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯಗಳನ್ನು ಮಾರಾಟ ಮಾಡಲಾಗುವುದು. ಬ್ಯಾಟರಿ ಚಾಲಿತ ತ್ರಿಚಕ್ರ ವಾಹನದಲ್ಲಿ ಮೀನು ಖಾದ್ಯ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ ಜಿಲ್ಲೆಗಳಿಗೂ 150 ವಾಹನಗಳನ್ನು ಮುಂದಿನ ದಿನಗಳಲ್ಲಿ ವಿತರಿಸಲಾಗುವುದು. ವಾಹನ ಭದ್ರತಾ ಠೇವಣಿ 2 ಲಕ್ಷ ರೂ., ಮಾಸಿಕ 3000 ರೂ. ಬಾಡಿಗೆಗೆ ನೀಡಲಾಗುವುದು.

https://twitter.com/CMofKarnataka/status/1726906557680812353

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read