HomeLatest Newsರೈಲಿಗೆ ತಲೆ ಕೊಟ್ಟು ಪುತ್ರ ಆತ್ಮಹತ್ಯೆ, ಹೃದಯಾಘಾತದಿಂದ ತಾಯಿ ಸಾವು

ರೈಲಿಗೆ ತಲೆ ಕೊಟ್ಟು ಪುತ್ರ ಆತ್ಮಹತ್ಯೆ, ಹೃದಯಾಘಾತದಿಂದ ತಾಯಿ ಸಾವು

ಧಾರವಾಡ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದಾಗಲೇ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಧಾರವಾಡದ ತೇಜಸ್ವಿ ನಗರದಲ್ಲಿ ಘಟನೆ ನಡೆದಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಹಬೂಬ್ ಸಾಬ್ ನದಾಫ್(47) ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುಃಖ ತಡೆಯಲಾಗದೆ ಅವರ ತಾಯಿ ಮುಗುಟಬಿ ನದಾಫ್(68) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಗನ ಸಾವಿನ ನೋವಿನ ಬೆನ್ನಲ್ಲೇ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಮೆಹಬೂಬ್ ಸಾಬ್ ಬೆಳಿಗ್ಗೆ ರಾಜೀವ್ ಗಾಂಧಿನಗರದ ಬಳಿ ರೈಲು ಹಳಿಗೆ ಬಿದ್ದಿದ್ದು ರೈಲ್ವೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆ ಮುಗಿದ ನಂತರ ಕುಟುಂಬದವರಿಗೆ ಹಸ್ತಾಂತರಿಸಿದ್ದರು. ಸಂಜೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದವರು, ಸ್ಥಳೀಯರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗಲೇ ತಾಯಿ ಮುಗುಟಬಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪುತ್ರನ ಅಂತ್ಯಕ್ರಿಯೆ ಮುಗಿಸಿ ಬಂದ ನಂತರ ತಡರಾತ್ರಿ ತಾಯಿ ಅಂತ್ಯಕ್ರಿಯೆಯನ್ನು ಕೂಡ ನೆರವೇರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular