ಮಗ ಸಾವನ್ನಪ್ಪಿದ್ದು ಗೊತ್ತಾಗದೇ 4 ದಿನಗಳ ಕಾಲ ಶವದೊಂದಿಗೆ ಕಳೆದ ಅಂಧ ದಂಪತಿ

ಹೈದರಾಬಾದ್: ಮಗ ಸಾವನ್ನಪ್ಪಿರುವ ವಿಷಯ ಗೊತ್ತಾಗದೇ ವೃದ್ಧ ಅಂಧ ದಂಪತಿ ನಾಲ್ಕು ದಿನಗಳ ಕಾಲ ಶವದ ಜೊತೆಯೇ ಕಳೆದಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಬೆಳಕಿಗೆ ಬಂದಿದೆ.

ಮನೆಯಲ್ಲಿ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿದ್ದು, ನಾಲ್ಕೈದು ದಿನಗಳ ಹಿಂದೆಯೇ ನಿದ್ರೆಯಲ್ಲಿಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೃದ್ಧ ಅಂಧ ದಂಪತಿಗೆ ತಮ್ಮ ಮಗ ಸಾವನ್ನಪ್ಪಿರುವುದು ಗೊತ್ತಾಗಿಲ್ಲ. ಆಹಾರ ಹಾಗೂ ನೀರಿಗಾಗಿ ತಮ್ಮ ಮಗನನ್ನು ಕರೆಯಲು ಅವರು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾಲ್ಕು ದಿನಗಳಿಂದ ಊಟ, ನೀರು ಇಲ್ಲದೇ ದಂಪತಿ ಸುಸ್ತಾಗಿ ಬಳಲಿದ್ದಾರೆ. ಅವರ ಕೂಗು ಅಕ್ಕಪಕ್ಕದವರಿಗೂ ಕೇಳಿಲ್ಲ. ದಂಪತಿಯ ಮಗ ನಾಲ್ಕು ದಿನಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ ಇದೆ ಎಂದು ನಾಗೋಲ್ ಪೊಲೀಸ್ ಠಾಣೆಯ ಸೂರ್ಯ ನಾಯಕ್ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read