ಮಡಿಕೇರಿ: ಕುಡಿದ ಮತ್ತಿನಲ್ಲಿ ತಂದೆಯನ್ನೇ ಕೊಲೆ ಮಾಡಿದ ಪುತ್ರ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಇತರೆ ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಬುರೋ ಕೊಲೆಯಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪುತ್ರ ಹೊಸ್ಕೇರಿ ಗ್ರಾಮದ ಪ್ರಶಾಂತ್ ಮುದಿ(27), ಎಂ.ಎಸ್. ದೇವಯ್ಯ(71), ಭಾರತಿ ಎಂ.ಡಿ.(57), ಶ್ರೀಕಾಂತ್ ಮುದಿ(25), ಸುಧನ್ ಮುದಿ(37), ತನುಶ್ರೀ(20), ಬಸಂತಿ ಮುದಿ(49) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕಟ್ಟೆಮಾಡು ಗ್ರಾಮದ ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಬುರೋ ಎಂಬಾತನನ್ನು ಜನವರಿ 11ರಂದು ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ತನಿಖೆ ನಡೆಸಿದ ಸಂದರ್ಭದಲ್ಲಿ ಮದ್ಯಪಾನ ಮಾಡಿ ಪುತ್ರ ಪ್ರಶಾಂತ್ ಮುದಿ ತಂದೆಯೊಂದಿಗೆ ಜಗಳವಾಡಿದ್ದ. ಈ ಸಂದರ್ಭ ಮಗ ಪ್ರಶಾಂತ್ ಮುದಿ ತಂದೆಗೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ ಎಂದು ೆಸ್ಪಿ ಆರ್.ಎನ್. ಬಿಂದುಮಣಿ ಮಾಹಿತಿ ನೀಡಿದ್ದಾರೆ.

