HomeKarnatakaSHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

SHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

ದೊಡ್ಡಬಳ್ಳಾಪುರ: ಮಗನೊಬ್ಬ ಹೆತ್ತ ತಾಯಿಯ ಕತ್ತು ಕುಯ್ದು ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಗರಾಳಗುಟ್ಟೆ ಬಳಿ ನಡೆದಿದೆ.

ರತ್ನಮ್ಮ (56) ಮಗನಿಂದಲೇ ಕೊಲೆಯಾದ ಮಹಿಳೆ. ಗಂಗರಾಜು ತಾಯಿಯನ್ನೇ ಕೊಂದ ಮಗ. ತಾಯಿ-ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಕೋಪದಲ್ಲಿ ಗಂಗರಾಜು ಚಾಕುವಿನಿಂದ ತಾಯಿಯ ಕತ್ತು ಸೀಳಿ ಕೊಲೆಗೈದಿದ್ದಾನೆ. ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular