ಅಪ್ರಾಪ್ತ ಪುತ್ರನಿಗೆ ಸ್ಕೂಟರ್ ಕೊಟ್ಟಿದ್ದ ಅಮ್ಮನಿಗೆ ಶಾಕ್: 30 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಡಿಎಲ್ ಇಲ್ಲದಿದ್ದರೂ ಅಪ್ರಾಪ್ತ ಮಗನಿಗೆ ಚಾಲನೆ ಮಾಡಲು ಸ್ಕೂಟರ್ ನೀಡಿದ ತಾಯಿಗೆ ಶಿವಮೊಗ್ಗದ ಮೂರನೇ ಎಸಿಜೆ ಹಾಗೂ ಜೆಎಂಎಫ್ ಕೋರ್ಟ್ 30,000 ರೂ. ದಂಡ ವಿಧಿಸಿದೆ.

ಜನವರಿ 30ರಂದು ಶಿವಮೊಗ್ಗ ಪೂರ್ವ ಸಂಚಾರ ಠಾಣೆಯ ಪಿಎಸ್ಐ ನವೀನ್ ಕುಮಾರ್ ಮಠಪತಿ ಎಸ್.ಪಿ.ಎಂ. ರಸ್ತೆಯ ಕೋಟೆ ಆಂಜನೇಯ ದೇವಾಲಯ ಸಮೀಪ ವಾಹನ ತಪಾಸಣೆ ಮಾಡುವಾಗ 17 ವರ್ಷದ ಬಾಲಕ ಸ್ಕೂಟರ್ ಚಾಲನೆ ಮಾಡುತ್ತಿರುವುದು ಕಂಡು ಬಂದಿದೆ.

ಪಡಿಶೀಲಿಸಿದಾಗ ಡಿಎಲ್ ಇಲ್ಲದೆ ಸ್ಕೂಟರ್ ಚಾಲನೆ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಾಹನದ ಮಾಲೀಕರಾದ ಬಾಲಕನ ತಾಯಿ ವಿರುದ್ಧ ಲಘು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ ವರದಿ ಸಲ್ಲಿಸಿದ್ದಾರೆ. ಆರೋಪಪಟ್ಟಿ ಪರಿಶೀಲಿಸಿದ ನ್ಯಾಯಾಧೀಶರು ಬಾಲಕನ ತಾಯಿಗೆ 30 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read