HomeKarnatakaಬುದ್ಧಿವಾದ ಹೇಳಿದ ತಂದೆಯನ್ನೇ ಕೊಲೆಗೈದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬುದ್ಧಿವಾದ ಹೇಳಿದ ತಂದೆಯನ್ನೇ ಕೊಲೆಗೈದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬುದ್ದಿವಾದ ಹೇಳಿದ ತಂದೆಯನ್ನೇ ಕೊಲೆಗೈದ ಪುತ್ರನಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ನಗರದ 68ನೇ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ರಾಜಾಜಿನಗರದ ನಿವಾಸಿ ಸಿ. ರಘು(30) ಶಿಕ್ಷೆಗೆ ಒಳಗಾದ ವ್ಯಕ್ತಿ. ರಾಜಾಜಿನಗರ ನಾಲ್ಕನೇ ಬ್ಲಾಕ್ ನ 7ನೇ ಮುಖ್ಯರಸ್ತೆಯಲ್ಲಿ ಲಾರಿ ಚಾಲಕ ರಾಮಚಂದ್ರ ಅವರು ಅನಾರೋಗ್ಯದಿಂದ ಬಳಸುತ್ತಿದ್ದ ಪತ್ನಿ ಮತ್ತು ಪುತ್ರ ರಘು ಜೊತೆಗೆ ವಾಸವಾಗಿದ್ದರು. ಮದ್ಯವ್ಯಸನಿಯಾಗಿದ್ದ ರಘು ಕೆಲಸಕ್ಕೆ ಹೋಗದೆ ಕುಡಿತಕ್ಕೆ ಹಣ ಕೊಡುವಂತೆ ಪೋಷಕರನ್ನು ಪೀಡಿಸುತ್ತಿದ್ದ.

ಇದೇ ವಿಚಾರವಾಗಿ 2025 ರ ಜನವರಿ 10ರಂದು ತಂದೆ ಮತ್ತು ಪುತ್ರ ಜಗಳವಾಡಿದ್ದರು. ಕೆಲಸಕ್ಕೆ ಹೋಗಿ ಹಣ ಸಂಪಾದಿಸುವಂತೆ ತಂದೆ ರಾಮಚಂದ್ರ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ರಘು ಕಬ್ಬಿಣದ ರಾಡ್ ನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿದ್ದ ರಾಜಾಜಿನಗರ ಠಾಣೆಯ ಅಂದಿನ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ 68ನೇ ಸಿಸಿಹೆಚ್ ಕೊರ್ಟ್ ನ್ಯಾಯಾಧೀಶರಾದ ಕೆ.ಎಸ್. ಭರತ್ ಕುಮಾರ್ ಅವರು ಪ್ರಾಸಿಕ್ಯೂಷನ್ ವಾದ ಮತ್ತು ಸಾಕ್ಷ್ಯಾಧಾರಗಳನ್ನು ಆಧರಿಸಿ ಅಪರಾಧಿ ರಘುಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾಗಿ ಚಿನ್ನವೆಂಕಟರಮಣಪ್ಪ, ಸರ್ಕಾರಿ ಅಭಿಯೋಜಕರಾಗಿ ಆರ್.ಸಿ. ಭಟ್ ಅವರು ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular