HomeIndiaಸೋನಮ್ ವಾಂಗ್ಚುಕ್ ಡಿಸ್ಚಾರ್ಜ್: ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಗೆ ಪುಷ್ಪ ನಮನ ಸಲ್ಲಿಕೆ

ಸೋನಮ್ ವಾಂಗ್ಚುಕ್ ಡಿಸ್ಚಾರ್ಜ್: ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಗೆ ಪುಷ್ಪ ನಮನ ಸಲ್ಲಿಕೆ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೇದಾಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್, ನೇರವಾಗಿ ರಾಜ್‌ಘಾಟ್‌ಗೆ ತೆರಳಿ, ರಾಷ್ಟ್ರಪಿತ ಮಾಹಾತ್ಮಾ ಗಾಂಧೀಜಿಗೆ ಪುಷ್ಪ ನಮನ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸೋನಮ್ ವಾಂಗ್ಚುಕ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಸ್ವಾಗತಿಸುತ್ತೇನೆ. ಆದರೆ ಇದು ಕೇವಲ ಒಂದು ಆರಂಭವಷ್ಟೇ. ಇನ್ನೂ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳಾಗಬೇಕು. ಶೀಘ್ರದಲ್ಲೇ ಪ್ರತಿಭಟನಾಕಾರರ ಮೇಲಿನ ಕೇಸ್‌ಗಳನ್ನು ಹಿಂಪಡೆಯಲಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

26 ದಿನಗಳ ಉಪವಾಸ ಸತ್ಯಾಗ್ರಹ ಮತ್ತು ಚಳವಳಿ ಮುಕ್ತಾಯವಾದ ಬಳಿಕ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಲು ರಾಜಘಾಟ್‌ಗೆ ಭೇಟಿ ನೀಡುವುದಾಗಿ ಕೇಳಿಕೊಂಡಿದ್ದೆ. ಕಳೆದ ಐದಾರು ವರ್ಷಗಳಿಂದ ನಾವು ಲಡಾಖ್‌ನಲ್ಲಿ ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಸಿಕೊಂಡು ಬರುತ್ತಿದ್ದೇವೆ. ಆದರೆ, ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುತ್ತದೆಯೋ ಇಲ್ಲವೋ ಎಂಬ ಖಚಿತತೆ ಇರಲಿಲ್ಲ. ಆದರೆ ಈ ಬಾರಿ, ನೂರು ವರ್ಷಗಳ ಬಳಿಕವೂ ಗಾಂಧೀಜಿಯವರ ಮಾರ್ಗವು ರಾಷ್ಟ್ರೀಯ ಮಟ್ಟದಲ್ಲಿ ಅಷ್ಟೇ ಪ್ರಸ್ತುತವಾಗಿದೆ ಎಂಬುದನ್ನು ಕಂಡು ನನಗೆ ಧೈರ್ಯ, ನೆಮ್ಮದಿ ಸಿಕ್ಕಿದೆ. ಅಲ್ಲದೆ, ಈ ಅಹಿಂಸಾ ಮಾರ್ಗವು ಮುಂದಿನ ನೂರು ಅಥವಾ ಸಾವಿರ ವರ್ಷಗಳವರೆಗೂ ದೇಶಕ್ಕೆ ಪ್ರಸ್ತುತವಾಗಿ ಮುಂದುವರಿಯಲಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular