HomeLatest NewsBREAKING: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

BREAKING: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಜ್ಞ ವೈದ್ಯರಿಂದ ಸೋನಿಯಾ ಗಾಂಧಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಸೋನಿಯಾ ಗಾಂಧಿ ಅವರು ಕೆಲ ದಿನಗಳ ಹಿಂದಷ್ಟೇ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಕೆ ಬಳಿಕ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular