ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗಂಗಾ ರಾಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ಸೋಂಕಿನಿಂದಾಗಿ ಶ್ವಾಸನಾಳದ ಆಸ್ತಮಾ ಉಲ್ಬಣಗೊಂಡ ಕಾರಣ ಸುಮಾರು ಒಂದು ವಾರದ ಹಿಂದೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾನುವಾರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ ಮತ್ತು ಉತ್ತಮ ಚೇತರಿಕೆ ಕಂಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಂದು ಸಂಜೆ 5 ಗಂಟೆಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು, ಅವರ ನಿವಾಸದಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ಮುಂದುವರಿಸಲು ಸಲಹೆ ನೀಡಲಾಯಿತು ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎದೆಯ ಸೋಂಕಿನಿಂದಾಗಿ ಶ್ವಾಸನಾಳದ ಆಸ್ತಮಾ ಉಲ್ಬಣಗೊಂಡಿದ್ದರಿಂದ ವೈದ್ಯ ಡಾ. ಅರುಪ್ ಬಸು ಅವರ ನೇತೃತ್ವದಲ್ಲಿ ಜನವರಿ 5 ರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚೇತರಿಸಿಕೊಂಡಿದ್ದರಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಅವರಿಗೆ 79 ವರ್ಷ ತುಂಬಿತು.

