HomeLatest NewsBREAKING: ಕರ್ನಾಟಕ ಕುರ್ಚಿ ಕದನ: ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್

BREAKING: ಕರ್ನಾಟಕ ಕುರ್ಚಿ ಕದನ: ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್

ನವದೆಹಲಿ: ಕರ್ನಾಟಕ ಕುರ್ಚಿ ಕದನಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಹೈವೋಲ್ಟೇಜ್ ಮೀತಿಂಗ್ ನಡೆಯಲಿದೆ.

ಸೋನಿಯಾ ಗಾಂಧಿ ಅವರ ದೆಹಲಿ ನಿವಾಸದಲ್ಲಿ ಇಂದು ಸಂಜೆ 5 ಗಂಟೆಗೆ ಕಾಂಗ್ರೆಸ್ ಸಂಸದೀಯ ಸಭೆ ನಡೆಯಲಿದ್ದು, ಕರ್ನಾಟಕ ರಾಜ್ಯ ರಾಜಕಾರಣ, ವಿವಿಧ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಸಂಸದೀಯ ಸಭೆ ಬಳಿಕ ರಾಜ್ಯ ಕಾಂಗ್ರೆಸ್ ನ ನಾಯಕತ್ವದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇಂದು ಸೋನಿಯಾ ಗಾಂಧಿ ನಿವಾಸದಲ್ಲಿ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular