HomeIndiaಆಕ್ರೋಶಕ್ಕೆ ಕಾರಣವಾದ ಸೋನಿಯಾ ಗಾಂಧಿ 'ಪೂರ್ ಲೇಡಿ' ಹೇಳಿಕೆ : ಕಾಂಗ್ರೆಸ್ ಸ್ಪಷ್ಟನೆ

ಆಕ್ರೋಶಕ್ಕೆ ಕಾರಣವಾದ ಸೋನಿಯಾ ಗಾಂಧಿ ‘ಪೂರ್ ಲೇಡಿ’ ಹೇಳಿಕೆ : ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಪೂರ್ ಲೇಡಿ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸೋನಿಯಾ ಗಾಂಧಿ ಹೇಳಿಕೆಗೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಎಂದಿಗೂ ರಾಷ್ಟ್ರಪತಿಯವರನ್ನು ಕಾಂಗ್ರೆಸ್ ಪಕ್ಷ ಅಪಮಾನಿಸುವುದಿಲ್ಲ. ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಿಲ್ಲ. ಅಲ್ಲದೆ, ರಾಮ ಮಂದಿರ ಉದ್ಘಾಟನೆಗೂ ರಾಷ್ಟ್ರಪತಿಗಳನ್ನು ಕರೆದಿಲ್ಲ. ಇದು ನಿಜವಾದ ಅವಮಾನ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

ಸೋನಿಯಾ ಗಾಂಧಿ ಅವರ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸ ಸಮರಕ್ಕೆ ನಾಂದಿ ಹಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular