HomeLatest NewsBIG NEWS: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

BIG NEWS: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ, ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರಿಗೆ ಹೊಟ್ಟೆ ಸಂಬಂಧಿತ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಹಿಮಾಚಲ ಪ್ರದೇಶದಲ್ಲಿದ್ದಾಗ ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಶೀಮ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಫೆಬ್ರವರಿಯಲ್ಲಿಯೂ ಹೊಟ್ಟೆ ಸಂಬಂಧಿತ ಸಮಸ್ಯೆಯಿಂದಾಗಿ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಮತ್ತೆ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular