HomeEntertainmentBREAKING NEWS: ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ಸೋನು ಗೌಡ ನ್ಯಾಯಾಂಗ ಬಂಧನಕ್ಕೆ

BREAKING NEWS: ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ಸೋನು ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಖ್ಯಾತ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಜೈಲುಪಾಲಾಗಿದ್ದಾರೆ. ಬೆಂಗಳೂರು ಸಿಜೆಎಂ ಕೋರ್ಟ್ ಸೋನು ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಸೋನು ಗೌಡ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಇದೀಗ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular