ಬೆಂಗಳೂರು: ಗಾಯಕ ಸೋನು ನಿಗಮ್ ಗೆ ಆವಲಹಳ್ಳಿ ಪೊಲೀಸರು ಶಾಕ್ ನೀಡಲು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೇ, ವಿಚಾರಣೆಗೂ ಹಾಜರಾಗದೇ ಉದ್ಧಟತನ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೋನು ನಿಗಮ್ ಗೆ ಕನ್ನಡ ಹಾಡು ಹಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದರು. ಇದಕ್ಕೆ ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಸೋನು ನಿಗಮ್ ಕಿಡಿಕಾರಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಸೋನು ನಿಗಮ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋನು ನುಗಮ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ವೇಳೆ ಹೈಕೋರ್ಟ್ ಮೊರೆ ಹೋಗಿದ್ದ ಸೋನು ನಿಗಮ್ ಗೆ ಹೈಕೋರ್ಟ್, ಬಲವಂತದ ಕ್ರಮ ಬೇಡ, ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿ ಮಧ್ಯಂತರ ಆದೇಶ ಹೊರಡಿಸಿತ್ತು.
ಫೋನ್ ಕರೆ ಮಾದ್ ವಿಚಾರಣೆಗೆ ಸಮಯಾವಕಾಶ ನೀಡುವಂತೆ ಕೋರಿದ್ದರು. ಅದಕ್ಕೆ ಪೊಲೀಸರು ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇಷ್ಟಾದರೂ ಸೋನು ನಿಗಮ್ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಆವಲಹಳ್ಳಿ ಪೊಲೀಸರು ಹೈಕೋರ್ಟ್ ಮಧ್ಯಂತರ ಆದೇಶ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ.