HomeEntertainmentಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಗಾಯಕ ಸೋನು ನಿಗಮ್

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಗಾಯಕ ಸೋನು ನಿಗಮ್

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಹುಬ್ಬಳ್ಲಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದರು. ಗದ್ದುಗೆಗೆ ವಿಶೇಶ ಪೂಜೆ ನೆರವೇರಿಸಿದರು. ಇದೇ ವೇಳೆ ಸಿದ್ದಾರೂಢರ ಗದ್ದುಗೆ ಬಳಿ ಸೋನು ನಿಗಮ್ 10 ನಿಮಿಷ ಧ್ಯಾನ ಮಾಡಿದ್ದು ವಿಶೇಷವಾಗಿತ್ತು.

ಬಳಿಕ ಮಠದ ಟ್ರಸ್ಟ್ ವತಿಯಿಂದ ಗಾಯಕ ಸೋನು ನಿಗಮ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿದ್ಧಾರೂಢರ ಮೂರ್ತಿ ನೀಡಿ ಗೌರವಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಗೀತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸೋನು ನಿಗಮ್ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢರ ದರ್ಶನ ಪಡೆದರು.

For Latest News Updates, Join Our Whatsapp Community🚩
RELATED ARTICLES

Most Popular