HomeKarnatakaGood News: ಶೀಘ್ರದಲ್ಲೇ ಬೈಕ್‌ಗಳಿಗೆ ನೈಸ್ ರಸ್ತೆಯಲ್ಲಿ ಟೋಲ್‌ ಇಲ್ಲ

Good News: ಶೀಘ್ರದಲ್ಲೇ ಬೈಕ್‌ಗಳಿಗೆ ನೈಸ್ ರಸ್ತೆಯಲ್ಲಿ ಟೋಲ್‌ ಇಲ್ಲ

ಬೆಂಗಳೂರು ನಗರದ ನೈಸ್ ರಸ್ತೆಯಲ್ಲಿ ಸಂಚಾರ ನಡೆಸುವ ಬೈಕ್ ಸವಾರರಿಗೆ ಮಹತ್ವದ ಅಪ್‌ಡೇಟ್ ಒಂದಿದೆ. ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆ ಶೀಘ್ರದಲ್ಲೇ ಟೋಲ್ ಫ್ರೀಯಾಗಲಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನಿಡಿದ್ದಾರೆ.

ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಗೆ ವಿಧಿಸಲಾಗುತ್ತಿರುವ ಟೋಲ್ ಶುಲ್ಕ ರದ್ದು, ಹಲವಾರು ವರ್ಷಗಳಿಂದ ನೈಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ರೈತರಿಗೆ, ನಿವೇಶನ ಮಾಲೀಕರಿಗೆ ದೊರೆಯಬೇಕಾದ ಪರಿಹಾರದಲ್ಲಿ ಆಗಿರುವ ವಿಳಂಬದ ಕುರಿತು ಸಚಿವರು ಮಾತನಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ಉತ್ತರ

  • ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ನೈಸ್ ರಸ್ತೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ. ಉದ್ದದ ಹೊಸ ರಸ್ತೆಯನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುತ್ತದೆ.
  • ಗೃಹ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಚಿವ ಸಂಪುಟದ ಉಪ ಸಮಿತಿ ನೈಸ್ ಯೋಜನೆಯ ಸ್ಥಿತಿ, ಒಪ್ಪಂದದ ಷರತ್ತುಗಳು, ಟೋಲ್ ವಸೂಲಿ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಲಿದೆ.
  • ಉಪ ಸಮಿತಿ ತನ್ನ ವರದಿ ಸಲ್ಲಿಸಿದ ಬಳಿಕ ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆಯಲ್ಲಿ ಟೋಲ್ ರದ್ದುಪಡಿಸುವ ಕುರಿತು ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular