BIG NEWS : ಶೀಘ್ರದಲ್ಲೇ 200 ಪಶು ವೈದ್ಯರ ನೇಮಕಾತಿಗೆ ಕ್ರಮ : ಸಚಿವ ವೆಂಕಟೇಶ್

ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ 200 ಪಶುವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿದರು.

ಬೈಂದೂರಿನಲ್ಲಿ ಪಶುವೈದ್ಯರ ಕೊರತೆ ಬಗ್ಗೆ ವಿಧಾನಸಭೆಯಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಪ್ರಸ್ತಾಪ ಮಾಡಿದ್ದು, ನಮ್ಮ ಕ್ಷೇತ್ರದ 83 ಸಾವಿರ ಜಾನುವಾರುಗಳಿಗೆ ಇಬ್ಬರು ಪಶು ವೈದ್ಯರಿದ್ದಾರೆ ಎಂದರು.
ಇದಕ್ಕೆ ಪಶುಸಂಗೋಪನಾ ಸಚಿವ ವೆಂಕಟೇಶ್ ಉತ್ತರಿಸಿದ್ದು ಡಿಸೆಂಬರ್ ಒಳಗೆ ಅಗತ್ಯ ಪಶುವೈದ್ಯರ ನೇಮಕ ಮಾಡಲಾಗುವುದು. ಶೀಘ್ರದಲ್ಲೇ 200 ಪಶು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚುವರಿ ಪಶುವೈದ್ಯರ ವರ್ಗಾವಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.

ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಅರಣ್ಯ ಸಂರಕ್ಷಣಾಧಿಕಾರಿಗಳು ಇಲಾಖೆಯ ಪ್ರಗತಿ ವಿವರಿಸುತ್ತಾ, ಪ್ರಸ್ತುತ ಕಲಬುರಗಿ ವೃತ್ತದ ಕಲಬುರಗಿ, ಬೀದರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ 583 ಹುದ್ದೆ ಮಂಜೂರಾಗಿದ್ದು, ಇದರಲ್ಲಿ 398 ಭರ್ತಿಯಾಗಿವೆ. ಉಳಿದಂತೆ 185 ಹುದ್ದೆಗಳು ಖಾಲಿ ಇವೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯೆಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ಖಾಲಿ ಹುದ್ದೆಗಳ ಮಾಹಿತಿ ನೀಡಿದಲ್ಲಿ ಮುಂದಿನ 6 ತಿಂಗಳಲ್ಲಿ ಭರ್ತಿ ಮಾಡಲಾಗುವುದು. ಅಲ್ಲಿಯ ವರೆಗೆ ಗುತ್ತಿಗೆ ಮೇಲೆ ಸಿಬ್ಬಂದಿಗಳ ಸೇವೆ ಪಡೆಯಿರಿ ಎಂದು ಸಲಹೆ ನೀಡಿದರು.

ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ನೆಡಲಾಗುವ ಮತ್ತು ಸಾರ್ವಜನಿಕರಿಗೆ, ವಿಧ್ಯಾರ್ಥಿಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ನೀಡಲಾಗುವ ಸಸಿಗಳ ಕಥೆ ಏನು? ಅವುಗಳ ಸಂರಕ್ಷಣೆ ಆಗುತ್ತಿವೆ, ಅವು ಬದುಕಿದಾವ, ಅವುಗಳ ಮೇಲೆ ಇಲಾಖೆ ನಿಗಾವಹಿಸಿದೆಯೇ? ಎಂದ ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, ಕಳೆದ 5 ವರ್ಷಗಳಲ್ಲಿ ನೆಡಲಾದ ಸಸಿಗಳ ಇಂದಿನ ಸ್ಥಿತಿಗತಿ ಕುರಿತು ಸಮಗ್ರ ವರದಿ ಸಲ್ಲಿಸಬೇಕೆಂದರು. ಕಲಬುರಗಿ ಸೇರಿದಂತೆ ಈ ಭಾಗದಲ್ಲಿ ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಸಸಿಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read