HomeKarnatakaಮನೆಯಲ್ಲಿ ಕಳವು ಮಾಡಿದ್ದ ಆರೋಪಿ ಅರೆಸ್ಟ್: ನಗದು, ಚಿನ್ನಾಭರಣ ವಶಕ್ಕೆ

ಮನೆಯಲ್ಲಿ ಕಳವು ಮಾಡಿದ್ದ ಆರೋಪಿ ಅರೆಸ್ಟ್: ನಗದು, ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ಮನೆಯ ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 50,000 ರೂ. ಮೌಲ್ಯದ ಆಭರಣ, 50,000 ರೂ.ನಗದು ವಶಕ್ಕೆ ಪಡೆಯಲಾಗಿದೆ. ಸೊರಬದ ಅಂಬೇಡ್ಕರ್ ಬಡಾವಣೆಯ ನಿವಾಸಿ ಗೋಪಿ ದೇವೇಂದ್ರಪ್ಪ ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ಕಾನುಕೇರಿ ಬಡಾವಣೆಯ ನಾಗರಾಜ ಅವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಹೆಂಚು ತೆಗೆದು ಕಳ್ಳತನ ಮಾಡಿದ್ದ,

ಚಿನ್ನಾಭರಣ, ನಗದು ಕಳುವಾದ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular