ಹೈದರಾಬಾದ್: ಸೌದಿ ಅರೇಬಿಯಾದಲ್ಲಿ ಖಾಸಗಿ ಬಸ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 45 ಭಾರತೀಯ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಅವರಲ್ಲಿ ಓರ್ವ ಕನ್ನಡಿಗ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿಯಾದ ರಭಸಕ್ಕೆ ಬಸ್ ಹೊತ್ತಿ ಉರಿದಿತ್ತು. ೪೫ ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ತೆಲಂಗಾಣದವರು ಎಂದು ತಿಳಿದುಬಂದಿದೆ. ಅವರಲ್ಲಿ ಓರ್ವ ಕನ್ನಡಿಗ ವ್ಯಕ್ತಿ ಇದ್ದು, ಹುಬ್ಬಳ್ಳಿ ಮೂಲದವರು ಇದ್ದಾರೆ ಎಂದು ತೆಲಂಗಾಣ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಪಾಸ್ ಪೋರ್ಟ್ ನಲ್ಲಿ ಕರ್ನಾಟಕದ ಹುಬ್ಬಳ್ಳಿ ಎಂದು ಉಲ್ಲೇಖವಾಗಿದೆ. ಹಾಗಾಗಿ ಮೃತರಲ್ಲಿ ಓರ್ವ ಹುಬ್ಬಳ್ಳಿ ಮೂಲದ ವ್ಯಕ್ತಿ ಕೂಡ ಇದ್ದಾರೆ. ವ್ಯಕ್ತಿಯ ಮೂಲದ ಬಗ್ಗೆ ಹೈದರಾಬಾದ್ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
