ಸೌಜನ್ಯಾ ಪ್ರಕರಣದ ಮರು ತನಿಖೆ ಇಲ್ಲ: ಪರಮೇಶ್ವರ್

ಧಾರವಾಡ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪ್ರಕರಣದ ಮರುತನಿಖೆ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕಾನೂನಾತ್ಮಕವಾಗಿ ಪೂರ್ಣಗೊಂಡಿದ್ದು, ಮರುತನಿಖೆ ಆಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಸೌಜನ್ಯಾ ಈ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಮರು ತನಿಖೆ ವಿಚಾರ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read