ಸೌಜನ್ಯ ಪ್ರಕರಣ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರುತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಎಸ್ಐಟಿ ಹೊಸದಾಗಿ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮರುತನಿಖೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರದ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ನವೀನ್ ಮತ್ತು ಬಲ್ಬಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ನಿಂದ ಪಿಎಎಲ್ ಸಲ್ಲಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅರ್ಜಿಯ ವಿಚಾರಣೆ ನಡೆಸಿದ್ದು, ಅರ್ಜಿಯಲ್ಲಿ ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read