HomeKarnatakaBIG NEWS: ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪಾಲುದಾರರ ವಿರುದ್ಧ FIR ದಾಖಲು

BIG NEWS: ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪಾಲುದಾರರ ವಿರುದ್ಧ FIR ದಾಖಲು

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸೌಂದರ್ಯ ಜಗದೀಶ್ ಮನೆಯಲ್ಲಿ ಡೆತ್ ನೋಟ್ ಒಂದು ಪತ್ತೆಯಾಗಿದ್ದು, ಬ್ಯುಸಿನೆಸ್ ಲಾಸ್ ಗೆ ಪಾಲುದಾರರು ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಸೌಂದರ್ಯ ಕನ್ ಸ್ಟ್ರಕ್ಷನ್ ಬ್ಯುಸಿನೆಸ್ ಲಾಸ್ ಆಗಿದ್ದು 60 ಕೋಟಿ ನಷ್ಟವುಂಟಾಗಿದೆ. ಇದಕ್ಕೆ ಮೂವರು ಪಾಲುದಾರರೇ ಕಾರಣ. ಚನ್ನಾಗಿಯೇ ನಡೆಯುತ್ತಿದ್ದ ಬ್ಯುಸಿನೆಸ್ ನ್ನು ನಷ್ಟದಲ್ಲಿದೆ ಎಂದು ಸುಳ್ಳು ಹೇಳಿ ಪಾಲುದಾರರು ನನಗೆ ವಂಚಿಸಿ ಮೋಸ ಮಾಡಿದ್ದಾರೆ. 60 ಕೋಟಿ ನಷ್ಟ ಮಾಡಿ, ವಂಚಿಸಿದ್ದು, ಇದರಿಂದ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಪತ್ತೆಯಾದ ಡೆತ್ ನೋಟ್ ನ್ನು ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದು, ಪಾಲುದಾರರ ವಿರುದ್ಧ ದೂರು ನೀಡಿದ್ದಾರೆ. ಸೌಂದರ್ಯ ಜಗದೀಶ್ ಅವರ ವ್ಯವಹಾರದ ಪಾಲುದಾರರಾಗಿರುವ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular