ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ವಿ.ಎಸ್. ಸುರೇಶ್, ಎಸ್‌.ಪಿ. ಹೊಂಬಣ್ಣ, ಎಸ್. ಸುಧೀಂದ್ರ ಅವರ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದು ಮಾಡಿದೆ.

ಆತ್ಮಹತ್ಯೆ ಮಾಡಿಕೊಂಡ ತಿಂಗಳ ನಂತರ ಸಿಕ್ಕ ಪತ್ರ ಆಧರಿಸಿ ಕೇಸು ದಾಖಲಿಸಲಾಗಿದೆ. ಆತ್ಮಹತ್ಯೆ ಪತ್ರದಲ್ಲಿ ಪ್ರಚೋದನೆ ಬಗ್ಗೆ ಆರೋಪವಿಲ್ಲ. ಕೇಸ್ ರದ್ದು ಪಡಿಸಬೇಕು ಎಂದು ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಏಕ ಸದಸ್ಯ ಪೀಠ ಪ್ರಕರಣವನ್ನು ರದ್ದುಪಡಿಸಿದೆ. ಆದೇಶದಲ್ಲಿರುವ ಅಭಿಪ್ರಾಯ ಇವರ ನಡುವಿನ ಬೇರೆ ವಿವಾದಗಳಿಗೆ ಅನ್ವಯವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read