ಕೊಲ್ಲೂರು: ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆಯಾಗಿದೆ. ನದಿಯಲ್ಲಿ ಈಜಲು ಹೋಗಿದ್ದ ಮಹಿಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ‍್ಣಿಕಾ ನದಿಯಲ್ಲಿ ಈ ಘಟನೆ ನಡೆದಿದೆ. ಆಗಸ್ಟ್ 27ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬಂದಿದ್ದ ಮಹಿಳೆ ವಸುಧಾ, ನದಿಯಲ್ಲಿ ಈಜಲು ಹೋಗಿದ್ದರು.
ನದಿಯಲ್ಲಿ ಈಜುವ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮುಳುಗು ತಜ್ಞ ಈಶ್ವರ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ವಸುಧಾ ಶವ ಪತ್ತೆ ಮಾಡಲಾಗಿದೆ. ಕೊಲ್ಲೂರು ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.