HomeInternationalಸೌತ್ ಆಫ್ರಿಕಾದ ಬಾರ್ ನಲ್ಲಿ ದುಷ್ಕಗಳ ಅಟ್ಟಹಾಸ: ಗುಂಡಿನ ದಾಳಿಗೆ 17 ಜನರು ಸಾವು

ಸೌತ್ ಆಫ್ರಿಕಾದ ಬಾರ್ ನಲ್ಲಿ ದುಷ್ಕಗಳ ಅಟ್ಟಹಾಸ: ಗುಂಡಿನ ದಾಳಿಗೆ 17 ಜನರು ಸಾವು

ಜೋಹಾನ್ಸ್ ಬರ್ಗ್: ಸೌತ್ ಆಫ್ರಿಕಾದ ಬಾರ್ ವೊಂದರಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 17 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಜೋಹಾನ್ಸ್‌ಬರ್ಗ್‌ನ ನೈಋತ್ಯದಲ್ಲಿರುವ ವೆಡೆಲಾದ ವೆಸ್ಟ್ ರಾಂಡ್ ಪ್ರದೇಶದಲ್ಲಿನ ಬಾರ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 13 ಜನ ಪುರುಷರು ಮತ್ತು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ ಎಂದು ದಕ್ಷಿಣ ಆಫ್ರಿಕಾದ ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೌಟೆಂಗ್ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ 9:30 ರ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿ ನಡೆಸಲು ಬಂದಿದ್ದ 8 ಜನ ಶಂಕಿತರು ಎಕೆ-47 ರೈಫಲ್‌ಗಳು ಮತ್ತು ಪಿಸ್ತೂಲ್‌ಗಳನ್ನ ಹೊಂದಿದ್ದರು ಎನ್ನಲಾಗಿದೆ.

ದುಷ್ಕರ್ಮಿಗಳು ಬಾರ್‌ ಹೊರಗಡೆ ಮದ್ಯಪಾನ ಮಾಡುತ್ತಿದ್ದ ಗ್ರಾಹಕರ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಒಳಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ 15 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ದಕ್ಷಿಣ ಆಫ್ರಿಕಾ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ: ಕಾರ್ಯಕ್ರಮ ಆಯೋಜಕರು, ಕಟ್ಟಡ ಮಾಲೀಕರ ವಿರುದ್ಧ FIR ದಾಖಲು

ಮಂಗಳೂರು: ಸಮಾರಂಭವೊಂದರಲ್ಲಿ ಮಂಗಳೂರಿನಲ್ಲಿ ಬಾಲ್ಕನಿ ತಡೆ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಎಫ್ಐರ್ ದಾಖಲಾಗಿದೆ.

ಪದಗ್ರಹಣ ಸಮಾರಂಭದಲ್ಲಿ ಕನ್ವೆನ್ ಶನ್ ಹಾಲ್ ನ ಬಾಲ್ಕನಿಯ ತಡೆ ಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಬ್ರೇನ್ ಡೆಡ್ ಆಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ.

ಮಂಗಳೂರಿನ ಪಾಂಡವೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ಶಮಾಜ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಯಾಗಿದ್ದ. ನಿನ್ನೆ ರಾಮಲಕ್ಷ್ಮಣ ಕನ್ವೆನ್ಶನ್ ಹಾಲ್ ನಲ್ಲಿ ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಗೊಂಡಿದ್ದ ವಿದ್ಯಾರ್ಥಿಗಳ ಸಂಭ್ರಮಾಚರಣೆ ವೇಳೆ ಕಟ್ಟಡದ ಬಾಲ್ಕನಿಯ ತಡೆಗೋಡೆ ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಶಮಾಜ್ ಬ್ರೇನ್ ಡೆಡ್ ಆಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ.

ಉಳಿದ ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪಾಂಡವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಗನ ಸಾವಿನ ಬೆನ್ನಲ್ಲೇ ಮೃತ ಮೊಹಮ್ಮದ್ ಶಮಾಜ್ ತಂದೆ ಪಾಂಡವೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿರ್ಲಕ್ಷ ಹಾಗೂ ಬೇಜವಾಬ್ದಾರಿಯಿಂದ ದುರಣ್ತ ಸಂಭವಿಸಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular