HomeLatest NewsBREAKING NEWS: ಬಾಕ್ಸಿಂಗ್ ಡೇ ಟೆಸ್ಟ್: ಭಾರತಕ್ಕೆ ಇನಿಂಗ್ಸ್, 32 ರನ್ ಗಳಿಂದ ಸೋಲು

BREAKING NEWS: ಬಾಕ್ಸಿಂಗ್ ಡೇ ಟೆಸ್ಟ್: ಭಾರತಕ್ಕೆ ಇನಿಂಗ್ಸ್, 32 ರನ್ ಗಳಿಂದ ಸೋಲು

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿದೆ. ಮೊದಲ ಟೆಸ್ಟ್ ನಲ್ಲಿ ಭಾರತ ಇನಿಂಗ್ಸ್ ಹಾಗೂ 32 ರನ್ ಗಳಿಂದ ಸೋಲು ಕಂಡಿದೆ.

ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಎರಡನೇ ಇನಿಂಗ್ಸ್ ನಲ್ಲಿ 34.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲು ಕಂಡಿದೆ. ವಿರಾಟ್ ಕೊಹ್ಲಿ 76, ಶುಭಮನ್ ಗಿಲ್ 26 ಹೊರತುಪಡಿಸಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ನಾಲ್ವರು ಶೂನ್ಯ ಸಂಪಾದನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ಪರ ನಾಂದ್ರೆ ಬರ್ಗರ್ 4, ಮಾರ್ಕೊ ಜಾನ್ಸನ್ 3, ಕಾಗಿಸೋ ರಬಾಡ 2 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ

ಮೊದಲ ಇನಿಂಗ್ಸ್ 67.4 ಓವರ್ ಗಳಲ್ಲಿ 245/10

ಎರಡನೇ ಇನಿಂಗ್ಸ್ 34.1 ಓವರ್ ಗಳಲ್ಲಿ 131/10

 ದಕ್ಷಿಣ ಆಫ್ರಿಕಾ

ಮೊದಲ ಇನಿಂಗ್ಸ್ 108.4 ಓವರ್ ಗಳಲ್ಲಿ 408/10

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular