HomeLive Newsಟಿ ಟ್ವೆಂಟಿ ವಿಶ್ವಕಪ್; ಆಫ್ಘಾನಿಸ್ತಾನ ತಂಡವನ್ನು ಬಗ್ಗು ಬಡಿಯುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟ...

ಟಿ ಟ್ವೆಂಟಿ ವಿಶ್ವಕಪ್; ಆಫ್ಘಾನಿಸ್ತಾನ ತಂಡವನ್ನು ಬಗ್ಗು ಬಡಿಯುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟ ದಕ್ಷಿಣ ಆಫ್ರಿಕಾ

ಇಂದು ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ಎದುರು 9 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟಿ ಟ್ವೆಂಟಿ ವಿಶ್ವಕಪ್ ನ ಫೈನಲ್ ಗೆ ಪ್ರವೇಶ ಪಡೆದಿದೆ. ಮತ್ತೊಂದು ಸೆಮಿ ಫೈನಲ್ ನಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗುತ್ತಿದ್ದು, ಗೆದ್ದ ತಂಡ ದಕ್ಷಿಣ ಆಫ್ರಿಕಾ ತಂಡದ ಎದುರು ಕಾದಾಡಲಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ದಕ್ಷಿಣ ಆಫ್ರಿಕಾದ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ಅಫ್ಘಾನಿಸ್ತಾನ ತಂಡ ಕೇವಲ 56 ರನ್ಗಳಿಗೆ ಆಲ್ ಔಟ್ ಆಗಿದೆ. ಗುರಿ  ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ ಐದು ರನ್ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರೆ. ರೀಜಾ ಹೆಂಡ್ರಿಕ್ಸ್ ಹಾಗೂ ಐಡೆನ್ ಮಾರ್ಕ್ರಾಮ್ ಉತ್ತಮ ಜೊತೆಯಾಟವಾಡುವ ಮೂಲಕ 8.5 ಓವರ್ ಗಳಲ್ಲಿ ತಮ್ಮ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular