HomeLatest Newsಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಕೇಂದ್ರದ ನಿರ್ಧಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಭೆ

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಕೇಂದ್ರದ ನಿರ್ಧಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಭೆ

ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತಾಗಿ ಚರ್ಚೆ ನಡೆಸಲು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಕ್ಷಿಣ ಭಾರತ ಸಮಾಜವಾದಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿರ್ಧಾರ ಕೈಗೊಳ್ಳುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಇದರಿಂದ ರಾಜ್ಯಗಳಿಗೆ ಬರಬೇಕಾದ ಅನುದಾನ ಕಡಿತವಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನ್ಯಾಯವಾಗುತ್ತಿದೆ. ಇದನ್ನು ಪ್ರಜಾಸತ್ತಾತ್ಮಕವಾಗಿಯೇ ಪ್ರಶ್ನಿಸಬೇಕಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ. ಆದರೆ, ಕೇಂದ್ರದಿಂದ ಬರುವ ಅನುದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ನರೇಗಾ ಯೋಜನೆ ಮೂಲಕ ನೀಡುತ್ತಿದ್ದ ಅನುದಾನದ ಪ್ರಮಾಣವನ್ನು ಕೂಡ ಕಡಿಮೆ ಮಾಡಲಾಗಿದ್ದು, ರಾಜ್ಯದ ಆರ್ಥಿಕ ವ್ಯವಸ್ಥೆಗೆ ಪೆಟ್ಟು ಬೀಳಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular