BIG NEWS: ದಕ್ಷಿಣ ಕೊರಿಯಾದಲ್ಲಿ ವಿಮಾನ ಅಪಘಾತ ಪ್ರಕರಣ: 120ಕ್ಕೂ ಹೆಚ್ಚು ಪ್ರಯಾಣಿಕರು ಸಾವು: ಜೆಜು ಏರ್ ಕ್ಷಮೆಯಾಚನೆ

ಸಿಯೋಲ್: ದಕ್ಷಿಣ ಕೊರಿಯಾದ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ 120ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಥಾಯ್ಲೆಂಡ್ ರಾಜಧಾನಿ ಬ್ಯಂಕಾಕ್ ನಿಂದ ಬಂದ ವಿಮಾನ ಲ್ಯಾಂಡ್ ಆಗುವ ವೇಳೆ ರನ್ ವೇ ಯಿಂದ ಜಾರಿ ಗೊಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿಮಾನದಲ್ಲಿದ್ದ 120ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಮಾನದಲ್ಲಿ 175 ಜನರು ಪ್ರಯಾನಿಕರು ಹಾಗೂ 6 ಮಂದಿ ಸಿಬ್ಬಂದಿಗಳು ಇದ್ದರು. ದುರಂತದಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ.

ಈ ಬಗ್ಗೆ ಜೆಜು ಏರ್ ಸಂಸ್ಥೆ ಕ್ಷಮೆ ಕೋರಿದ್ದು, ಮುಯಾನ್ ವಿಮಾನ ದುರಂತದಿಂದ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತೇವೆ. ದುರಂತದ ಬಗ್ಗೆ ವಿಷಾಧ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read