ತಮಿಳುನಾಡಿನ ಮಹಾಬಲಿಪುರಂನಲ್ಲಿ 31ನೇ ದಕ್ಷಿಣ ವಲಯ ಮಂಡಳಿ (Southern Zonal Council) ಸಭೆ ಆರಂಭವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಗೆ ಹಾಜರಾಗಿ ಅಧ್ಯಕ್ಷತೆ ವಹಿಸಿದ್ದಾರೆ.
ಹೌದು.ತಮಿಳುನಾಡಿನ ಮಹಾಬಲಿಪುರಂನಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ ಆರಂಭಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ವಹಿಸಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಹಾಗೂ ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದು, ನದಿ ನೀರು ಹಂಚಿಕೆ, ರಾಜ್ಯಗಳ ನಡುವಿನ ಬಾಕಿ ವಿಚಾರಗಳು, ಸಾರಿಗೆ, ಶಿಕ್ಷಣ ಹಾಗೂ ಭದ್ರತೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ದಕ್ಷಿಣ ಭಾರತದ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷದ್ವೀಪದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
ತಮಿಳುನಾಡು ಸರ್ಕಾರ ಈ ಮಹತ್ವದ ಸಭೆಯ ಆತಿಥ್ಯ ವಹಿಸಿದೆ. ತೆಲಂಗಾಣದ ಪರವಾಗಿ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ, ಸಚಿವ ತುಮ್ಮಲ ನಾಗೇಶ್ವರ ರಾವ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ಪ್ರಸ್ತಾವನೆಗಳು ಹಾಗೂ ಅಭಿವೃದ್ಧಿ ವರದಿಗಳನ್ನು ಅವರು ಸಭೆಯಲ್ಲಿ ಮಂಡಿಸಲಿದ್ದಾರೆ.
ದಕ್ಷಿಣ ಭಾರತದ ರಾಜ್ಯಗಳ ನಡುವೆ ಸಹಕಾರಿ ಒಕ್ಕೂಟ ವ್ಯವಸ್ಥೆ (Cooperative Federalism) ಮತ್ತಷ್ಟು ಬಲಪಡಿಸುವುದು ಈ ಸಭೆಯ ಪ್ರಮುಖ ಉದ್ದೇಶವಾಗಿದೆ. ರಾಜ್ಯಗಳ ನಡುವೆ ಬಾಕಿ ಉಳಿದಿರುವ ವಿಭಜನೆಗೆ ಸಂಬಂಧಿಸಿದ ವಿಷಯಗಳು, ನದಿ ನೀರು ಹಂಚಿಕೆ, ಸಾರಿಗೆ, ಶಿಕ್ಷಣ ಹಾಗೂ ಭದ್ರತೆ ಸೇರಿದಂತೆ ಹಲವು ಅಂತಾರಾಜ್ಯ ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಲಿದೆ.

